ಎಡನೀರು ಮಠದ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಸಂಸ್ಮರಣೆ ಹಾಗೂ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರ ಪ್ರಥಮ ಚಾತುರ್ಮಾಸ್ಯ ವ್ರತಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಯಕ್ಷಗಾನ ತಾಳಮದ್ದಳೆ ಸಪ್ತಾಹವು ಭಾನುವಾರ ಸಂಪನ್ನಗೊಂಡಿತು.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಉಜಿರೆ ಇದರ ಉಜಿರೆ ಅಶೋಕ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಹಿರಿಯ ಅರ್ಥಧಾರಿ, ಸಂಘಟಕ, ವಿದ್ವಾಂಸ ಡಾ.ಶಾಂತಾರಾಮ ಪ್ರಭು ನಿಟ್ಟೂರು ಇವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಸಂಘಟಕ ಉಜಿರೆ ಅಶೋಕ ಭಟ್ಟರು ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮ ನಿರ್ವಹಿಸಿದರು. ಡಾ.ಪದ್ಮನಾಭ ಸಿಬಂತಿ ಅವರು ಅಭಿನಂದನಾ ನುಡಿಗಳನ್ನಾಡಿದರು. ಡಾ.ಭುಜಬಲಿ ಧರ್ಮಸ್ಥಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಬಾರಿಯ ಯಕ್ಷಗಾನ ಸಪ್ತಾಹದ ಕೊನೆಯ ಪ್ರಸಂಗ 'ಗಂಗಾವತರಣ' ತಾಳಮದ್ದಳೆ ನಡೆಯಿತು. ಕಲಾವಿದರಾಗಿ ಹಿಮ್ಮೇಳದಲ್ಲಿ ಎಂ. ದಿನೇಶ್ ಅಮ್ಮಣ್ಣಾಯ, ಕೃಷ್ಣಪ್ರಕಾಶ ಉಳಿತ್ತಾಯ, ಸತ್ಯಜಿತ್ ರಾವ್ ರಾಯಿ ಹಾಗೂ ಮುಮ್ಮೇಳದಲ್ಲಿ ಉಜಿರೆ ಅಶೋಕ್ ಭಟ್, ಡಾ. ಶಾಂತಾರಾಮ ಪ್ರಭು ನಿಟ್ಟೂರು, ಡಾ. ಪದ್ಮನಾಭ ಸಿಬಂತಿ, ಶಶಾಂಕ ಅರ್ನಾಡಿ ಭಾಗವಹಿಸಿದ್ದರು.
Yakshagana.in ಸೇರಿಕೊಳ್ಳಿ: ವಾಟ್ಸ್ಆ್ಯಪ್-1 | ವಾಟ್ಸ್ಆ್ಯಪ್-2 | ಟೆಲಿಗ್ರಾಂ | ಫೇಸ್ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್ಸ್ಟಾಗ್ರಾಂ
Tags:
ಸುದ್ದಿ