![]() |
ಎಂ.ಗಂಗಾಧರ ರಾವ್, ಯಕ್ಷಗಾನ ಕಲಾರಂಗ ಅಧ್ಯಕ್ಷ |
ಉಡುಪಿ: ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ 'ಯಕ್ಷಗಾನ ಕಲಾರಂಗ'ದ 46ನೇ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಆಗಸ್ಟ್ 9, 2021ರಂದು ಸಭೆ ನಡೆಸಿ ಎಂ. ಗಂಗಾಧರ್ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು. 2021-22ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳ ವಿವರ ಇಲ್ಲಿದೆ.
ಉಪಾಧ್ಯಕ್ಷರು: ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ, ಕಾರ್ಯದರ್ಶಿ: ಮುರಲಿ ಕಡೆಕಾರ್, ಜತೆಕಾರ್ಯದರ್ಶಿಗಳು: ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ, ಕೋಶಾಧಿಕಾರಿ: ಮನೋಹರ ಕೆ.
ಸದಸ್ಯರು: ಕೆ. ಗಣೇಶ್ ರಾವ್, ತಲ್ಲೂರು ಶಿವರಾಮ ಶೆಟ್ಟಿ, ಬಿ.ನಾರಾಯಣ, ಪ್ರೊ. ಕೆ. ಸದಾಶಿವ ರಾವ್, ಪ್ರೊ.ಎಂ.ಎಲ್.ಸಾಮಗ, ಎಸ್. ಗಣರಾಜ್ ಭಟ್, ಬಿ. ಭುವನಪ್ರಸಾದ್ ಹೆಗ್ಡೆ, ಅನಂತರಾಜ ಉಪಾಧ್ಯ, ಎಚ್.ಎನ್.ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ವಿದ್ಯಾಪ್ರಸಾದ್, ಅಶೋಕ್ ಎಂ, ದಿನೇಶ್ ಪಿ. ಪೂಜಾರಿ, ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್.
ಆಹ್ವಾನಿತರು: ಕೆ. ಗೋಪಾಲ, ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ಪೃಥ್ವಿರಾಜ್ ಕವತ್ತಾರ್, ಕೆ. ಆನಂದ ಶೆಟ್ಟಿ, ನಾಗರಾಜ ಹೆಗಡೆ, ರಾಜೀವಿ, ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ, ಸಂತೋಷ್ ಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಭಟ್ ಪುತ್ತೂರು, ಡಾ. ಶೈಲಜಾ, ಕಿಶೋರ್. ಸಿ. ಉದ್ಯಾವರ, ಪ್ರಸಾದ್ ರಾವ್ ಪುತ್ತೂರು, ಸುದರ್ಶನ ಬಾಯರಿ, ಗಣೇಶ್ ರಾವ್ ಎಲ್ಲೂರು, ರಮಾನಾಥ ಶ್ಯಾನುಭಾಗ, ರವಿನಂದನ್ ಎಸ್.ಟಿ, ವಿಪುಲ್ ಪ್ರಭು.
46ನೆಯ ವಾರ್ಷಿಕ ಮಹಾಸಭೆ
ಸಂಸ್ಥೆಯ 46ನೆಯ ವಾರ್ಷಿಕ ಮಹಾಸಭೆಯು ಆಗಸ್ಟ್ 07-2021 ಶನಿವಾರ ಸಂಜೆ 5.00 ಗಂಟೆಗೆ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಎಂ. ಗಂಗಾಧರ ರಾವ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ರಾಜೇಶ್ ನಾವಡ ಇವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಸಂಸ್ಥೆಯ ಅಗಲಿದ ಸದಸ್ಯರು ಮತ್ತು ಕಲಾವಿದರಿಗೆ ಉಪಾಧ್ಯಕ್ಷ ಎಸ್.ವಿ.ಭಟ್ ನುಡಿನಮನ ಸಲ್ಲಿಸಿದರು. ಜತೆಕಾರ್ಯದರ್ಶಿ ಹೆಚ್.ಎನ್ ಶೃಂಗೇಶ್ವರ ಗತಸಭೆಯ ವರದಿ ವಾಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯದರ್ಶಿ ವರದಿ ವಾಚಿಸಿದರು. ಕೋಶಾಧಿಕಾರಿ ಮನೋಹರ್ ಕೆ. ಯಕ್ಷಗಾನ ಕಲಾರಂಗ ಹಾಗೂ ಯಕ್ಷನಿಧಿಯ ಪರಿಶೋಧಿತ ಲೆಕ್ಕಪತ್ರವನ್ನೂ ಹಾಗೂ ಪ್ರೊ. ಸದಾಶಿವ ರಾವ್ ವಿದ್ಯಾಪೋಷಕ್‍ನ ಪರಿಶೋಧಿತ ಲೆಕ್ಕಪತ್ರವನ್ನು ಮಂಡಿಸಿದರು.
2021-22ನೆಯ ಸಾಲಿಗೆ ಸಿ.ಎ ರಾಜಾರಾಮ ಶೆಟ್ಟಿಯವರನ್ನು ಲೆಕ್ಕ ಪರಿಶೋಧಕರನ್ನಾಗಿ ನೇಮಕ ಮಾಡಲಾಯಿತು. ಈ ಎಲ್ಲ ಕಲಾಪಗಳು ಸದಸ್ಯರ ಸೂಚನೆ ಹಾಗೂ ಅನುಮೋದನೆಯೊಂದಿಗೆ ಅಂಗೀಕಾರಗೊಂಡವು. 2021-22ನೆಯ ಸಾಲಿನ ಕಾರ್ಯಕಾರೀ ಸಮಿತಿಗೆ ಹಾಗೂ ಆಹ್ವಾನಿತ ಸದಸ್ಯರನ್ನು ಆಯ್ಕೆಮಾಡಲಾಯಿತು. ಸಂಸ್ಥೆ ಸಮಾಜಮುಖಿಯಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ನಾವೆಲ್ಲ ಒಟ್ಟಾಗಿ ಸಂಸ್ಥೆಯ ಯಶಸ್ಸಿಗೆ ಶ್ರಮಿಸೋಣ ಎಂದು ಅಧ್ಯಕ್ಷ ಎಂ. ಗಂಗಾಧರ ರಾವ್ ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಗೆ ದೊಡ್ಡ ಮೊತ್ತ ನೀಡಿದ ಸುಕೇಶ್ ಕುಮಾರ್ ಕೆ. ಇವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ವಂದಿಸಿದರು.
Yakshagana.in ಸೇರಿಕೊಳ್ಳಿ: ವಾಟ್ಸ್ಆ್ಯಪ್-1 | ವಾಟ್ಸ್ಆ್ಯಪ್-2 | ಟೆಲಿಗ್ರಾಂ | ಫೇಸ್ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್ಸ್ಟಾಗ್ರಾಂ
Tags:
ಸುದ್ದಿ