ಉಮಾಕಾಂತ್ ಭಟ್, ಸುರತ್ಕಲ್ ವಾಸುದೇವ ರಾವ್‌ಗೆ ಕಲಾರಂಗ ಪ್ರಶಸ್ತಿ

ಸುರತ್ಕಲ್ ವಾಸುದೇವ ರಾವ್ ಹಾಗೂ ವಿದ್ವಾನ್ ಕೆರೆಕೈ ಉಮಾಕಾಂತ ಭಟ್
ಉಡುಪಿಯ ಯಕ್ಷಗಾನ ಕಲಾರಂಗ ಪೆರ್ಲ ಕೃಷ್ಣ ಭಟ್ ಮತ್ತು ಮಟ್ಟಿ ಮುರಲೀಧರ ರಾವ್ ನೆನಪಿನಲ್ಲಿ ತಾಳಮದ್ದಲೆ ಅರ್ಥಧಾರಿಗಳಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಅನುಕ್ರಮವಾಗಿ ವಿದ್ವಾನ್ ಉಮಾಕಾಂತ್ ಭಟ್ ಮತ್ತು ಸುರತ್ಕಲ್ ವಾಸುದೇವ ರಾವ್ ಆಯ್ಕೆಯಾಗಿದ್ದಾರೆ.

ಉಮಾಕಾಂತ್ ಭಟ್ ಇವರು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾಗಿದ್ದು ಪ್ರಸಿದ್ಧ ಅರ್ಥಧಾರಿಯಾಗಿ ಮಾನಿತರು. ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿಶೇಷ ಪಾಂಡಿತ್ಯ, ಆಗಾಧ ಪುರಾಣಜ್ಞಾನ ಹೊಂದಿದವರು. ಪ್ರವಚನಕಾರರಾಗಿಯೂ ಪರಿಚಿತರು.
ನಿವೃತ್ತ ಅಧ್ಯಾಪಕರಾದ ಸುರತ್ಕಲ್ ವಾಸುದೇವ ರಾವ್ ಅರ್ಥಧಾರಿಯಾಗಿ, ಯಕ್ಷಗಾನ ನಿರ್ದೇಶಕರಾಗಿ ಸಾಧನೆಗೈದವರು. ಸುರತ್ಕಲ್ ತಡಂಬೈಲ್‍ನ ದುರ್ಗಾಂಬಾ ಮಹಿಳಾ ತಾಳಮದ್ದಲೆ ಸಂಘಟನೆಯ ಸ್ಥಾಪಕರಾಗಿಯೂ ಗುರುತಿಸಲ್ಪಟ್ಟಿದ್ದಾರೆ.

ಪ್ರಶಸ್ತಿಯು ಪ್ರಶಸ್ತಿ ಪತ್ರ ಮತ್ತು ತಲಾ ₹20,000/- ರೂಪಾಯಿ ನಗದನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 26, ಭಾನುವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು