ಉಡುಪಿ: ಯಕ್ಷಗಾನ ವಿದ್ವಾಂಸರಿಗೆ ನೀಡಲಾಗುವವ 'ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ' ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಯಕ್ಷಗಾನ ಕಲಾವಿದ, ಅರ್ಥಧಾರಿ, ಪ್ರಸಂಗಕರ್ತ, ಪತ್ರಿಕಾ ಸಂಪಾದಕ, ಲೇಖಕ, ಯಕ್ಷಗುರು ಹೀಗೆ ಕಲೆ-ಸಾಹಿತ್ಯದ ಸಂಬಂಧಿ ಬಹು ಆಯಾಮಗಳಲ್ಲಿ ಸಾಧನೆ ಮಾಡಿದ ತಾರಾನಾಥ ವರ್ಕಾಡಿ ಆಯ್ಕೆಯಾಗಿದ್ದಾರೆ.
ಮೇ 22, 2022 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಅತಿಥಿಗಣ್ಯರ ಸಮಕ್ಷ ಕಾರ್ಯಕ್ರಮ ಜರುಗಲಿದೆ.
ಯಕ್ಷಗಾನ.ಇನ್ ಅಪ್‌ಡೇಟ್ಸ್ ಪಡೆಯಲು ವಾಟ್ಸ್ಆ್ಯಪ್ ಗ್ರೂಪ್ 5 ಸೇರಿಕೊಳ್ಳಿ ಅಥವಾ ಟೆಲಿಗ್ರಾಂನಲ್ಲಿ ಸೇರಿಕೊಳ್ಳಿ. ಫೇಸ್‌ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್‌ಸ್ಟಾಗ್ರಾಂ ಫಾಲೋ ಮಾಡಿ.
ಉಡುಪಿಯ ಯಕ್ಷಗಾನ ಕಲಾರಂಗವು ಯಕ್ಷಗಾನ ಸಂಘಟನೆ-ಕಲಾವಿದರು ಮತ್ತು ಯಕ್ಷಗಾನ ವಿದ್ವಾಂಸರನ್ನು ಗೌರವಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಇಪ್ಪತ್ತು ಪ್ರಶಸ್ತಿಗಳನ್ನು ನೀಡುತ್ತಿದೆ. ಇದರ ಅಂಗವಾಗಿ, ಡಾ. ತಲ್ಲೂರು ಶಿವರಾಮ ಶೆಟ್ಟರ ನೇತೃತ್ವದ ತಲ್ಲೂರು ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ ಪ್ರಾಯೋಜಕತ್ವದ ಈ ಪ್ರಶಸ್ತಿಯು ರೂ. 40,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Tags:
ಸುದ್ದಿ