ಎಸ್.ಎಂ. ಹೆಗಡೆ, ಕೆ.ಎಲ್. ಕುಂಡಂತಾಯರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಅರ್ಥಧಾರಿ ದಿ.ಎಸ್.ಎಂ.ಹೆಗಡೆ            ಅರ್ಥಧಾರಿ, ಲೇಖಕ ಕೆ.ಎಲ್.ಕುಂಡಂತಾಯ

ಉಡುಪಿ: ಕಲಾ ಪೋಷಕರಾದ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಹಿರಿಯ ಅರ್ಥಧಾರಿ ಎಸ್. ಎಮ್. ಹೆಗಡೆ ಹಾಗೂ ಅರ್ಥಧಾರಿ, ಲೇಖಕ, ಚಿಂತಕ ಕೆ.ಎಲ್. ಕುಂಡಂತಾಯ ಆಯ್ಕೆಯಾಗಿದ್ದಾರೆ.

ಯಕ್ಷಗಾನ ಕಲಾರಂಗದ ತಾಳಮದ್ದಲೆ ಸಪ್ತಾಹ ಮೇ 23 ರಿಂದ ಆರಂಭವಾಗಲಿದ್ದು, ಮೇ 29ರ ಭಾನುವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

ಯಕ್ಷಗಾನ.ಇನ್ ಅಪ್‌ಡೇಟ್ಸ್ ಪಡೆಯಲು ವಾಟ್ಸ್ಆ್ಯಪ್ ಗ್ರೂಪ್ 5 ಸೇರಿಕೊಳ್ಳಿ ಅಥವಾ ಟೆಲಿಗ್ರಾಂನಲ್ಲಿ ಸೇರಿಕೊಳ್ಳಿ. ಫೇಸ್‌ಬುಕ್ | ಟ್ವಿಟರ್ | ಯೂಟ್ಯೂಬ್ ಇನ್‌ಸ್ಟಾಗ್ರಾಂ ಫಾಲೋ ಮಾಡಿ.

ಎಸ್.ಎಮ್. ಹೆಗಡೆ ಮುಡಾರೆ ಅವರು ಪ್ರಶಸ್ತಿಗೆ ಆಯ್ಕೆಯಾದ ನಂತರ ಅಗಲಿರುವುದರಿಂದ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು. ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು