ಅನಾರೋಗ್ಯದಿಂದಿರುವ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಮತ್ತು ವಿಜಯ ದಂಪತಿಗೆ ಸುಳ್ಯಕ್ಕೋಡಿಯ ಅವರ ನಿವಾಸದಲ್ಲಿ, ಬೆಂಗಳೂರಿನ ದಿ. ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಕೊಡಮಾಡಿದ ಅಳಿಕೆ ರಾಮಯ್ಯ ರೈ ಯಕ್ಷ ನಿಧಿಯ ಹಸ್ತಾಂತರ ಮತ್ತು ಗೃಹ ಸನ್ಮಾನ ಸಮಾರಂಭದಲ್ಲಿ ಡಾ.ಜೋಶಿ ಮಾತನಾಡುತ್ತಿದ್ದರು.
ಯಕ್ಷಗಾನ.ಇನ್ ಅಪ್‌ಡೇಟ್ಸ್ ಪಡೆಯಲು ವಾಟ್ಸ್ಆ್ಯಪ್ ಗ್ರೂಪ್ 5 ಸೇರಿಕೊಳ್ಳಿ ಅಥವಾ ಟೆಲಿಗ್ರಾಂನಲ್ಲಿ ಸೇರಿಕೊಳ್ಳಿ. ಫೇಸ್‌ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್‌ಸ್ಟಾಗ್ರಾಂ ಫಾಲೋ ಮಾಡಿ.
ಅಭಿನಂದನಾ ಭಾಷಣ ಮಾಡಿದ ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ, 'ಜಯಾನಂದ ಸಂಪಾಜೆ ಭರವಸೆಯ ಕಲಾವಿದ. ರಂಗಸ್ಥಳದಲ್ಲೇ ಕಾಲು ಮುರಿತಕ್ಕೊಳಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಿ ಯಕ್ಷಗಾನ ಸೇವೆಗೆ ಮರಳುವಂತಾಗಲಿ' ಎಂದು ಹಾರೈಸಿದರು.
ದಿ.ಅಳಿಕೆ ರಾಮಯ್ಯ ರೈಯವರ ಪುತ್ರ ಮತ್ತು ಅಳಿಕೆ ಸ್ಮಾರಕ ಟ್ರಸ್ಟ್ ನ ಸಂಚಾಲಕ ಅಳಿಕೆ ದುರ್ಗಾಪ್ರಸಾದ್ ರೈ 2020-22 ನೇ ಸಾಲಿನ ಅಳಿಕೆ ಯಕ್ಷ ಸಹಾಯನಿಧಿ ನೀಡಿ ಕಲಾವಿದರನ್ನು ಗೌರವಿಸಿದರು. ಕೆ. ಲಕ್ಷ್ಮೀನಾರಾಯಣ ರೈ ಹರೇಕಳ ಅವರು ಸನ್ಮಾನ ಪತ್ರ ವಾಚಿಸಿದರು.
ಸನ್ಮಾನಕ್ಕೆ ಉತ್ತರಿಸಿ ಮಾತನಾಡಿದ ಜಯಾನಂದ ಸಂಪಾಜೆ, 'ತೆಂಕುತಿಟ್ಟಿನ ಕಟೀಲು, ಕುಂಟಾರು, ಪುತ್ತೂರು, ಹೊಸನಗರ, ಎಡನೀರು, ಹನುಮಗಿರಿ, ಬಪ್ಪನಾಡು ಮೇಳಗಳಲ್ಲಿ 32 ವರ್ಷ ತಿರುಗಾಟ ಪೂರೈಸಿರುವ ಸಂದರ್ಭದಲ್ಲಿ ಅನೇಕ ಹಿರಿಯ ಕಲಾವಿದರಿಂದ ಅವರ ಅನುಭವಗಳ ಲಾಭ ಪಡೆದಿರುವೆ. ಅವರೆಲ್ಲ ಸದಾ ವಂದ್ಯರು. ಅಲ್ಲದೆ ಈಗಿನ ಸಂಕಟದ ಸಮಯದಲ್ಲಿ ಸಹಾಯ ಹಸ್ತ ನೀಡಿದ ಕಲಾಭಿಮಾನಿಗಳನ್ನು ಎಂದಿಗೂ ಮರೆಯಲಾರೆ' ಎಂದು ಕೃತಜ್ಞತೆ ಸಲ್ಲಿಸಿದರು.
ಟ್ರಸ್ಟ್ ನಿರ್ದೇಶಕ ಮಹಾಬಲ ರೈ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಆರ್. ಜಗದೀಶ್ ರೈ, ಸ್ಥಳೀಯರಾದ ಕೇಶವ ಬಂಗ್ಲೆಗುಡ್ಡೆ, ಹೇಮಂತ್ ಸಂಪಾಜೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟ್ರಸ್ಟ್ ಸಲಹೆಗಾರ, ಯಕ್ಷಗಾನ, ಜಾನಪದ ಹಾಗೂ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು 2009 ರಿಂದ ಅಳಿಕೆ ಸ್ಮಾರಕ ಟ್ರಸ್ಟ್ ನಿರ್ವಹಿಸಿದ ಕಾರ್ಯಕಲಾಪಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಚಾಲಕ ಅಳಿಕೆ ದುರ್ಗಾಪ್ರಸಾದ್ ರೈ ವಂದಿಸಿದರು ವಿಜಯಾ ಜಯಾನಂದ, ಯಶೋದಾ ಶೇಷಪ್ಪ, ಮಕ್ಕಳಾದ ನೈಋತ್ಯ, ಭ್ರಾಮರಿ, ಜಾಹ್ನವಿ ಮತ್ತು ಜಶ್ಮಿತಾ ಅತಿಥಿಗಳನ್ನು ಗೌರವಿಸಿದರು.
Tags:
ಸುದ್ದಿ