ಮಂಗಳೂರು: ಲಯ ಬ್ರಹ್ಮ ಎಂದೇ ಹೆಸರು ಗಳಿಸಿದ ಖ್ಯಾತ ಚೆಂಡೆ-ಮದ್ದಳೆ ವಾದಕ ದಿ.ದಿವಾಣ ಭೀಮ ಭಟ್ಟರ ಸಂಸ್ಮರಣೆ ಕಾರ್ಯಕ್ರಮವು ಮೇ 13ರಂದು ಶಕ್ತಿನಗರದ ನಾಲ್ಯಪದವು ಶಾಲಾ ಮೈದಾನದಲ್ಲಿ ನಡೆಯಲಿದೆ.
ಇದೇ ಸಂದರ್ಭ ದಿವಾಣ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮಗಳು ಜರುಗಲಿವೆ ಎಂದು ಭೀಮ ಭಟ್ಟರ ಪುತ್ರ, ಉದ್ಯಮಿ ದಿವಾಣ ಗೋವಿಂದ ಭಟ್ಟ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಯಕ್ಷಗಾನ.ಇನ್ ಅಪ್‌ಡೇಟ್ಸ್ ಪಡೆಯಲು ವಾಟ್ಸ್ಆ್ಯಪ್ ಗ್ರೂಪ್ 5 ಸೇರಿಕೊಳ್ಳಿ ಅಥವಾ ಟೆಲಿಗ್ರಾಂನಲ್ಲಿ ಸೇರಿಕೊಳ್ಳಿ. ಫೇಸ್‌ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್‌ಸ್ಟಾಗ್ರಾಂ ಫಾಲೋ ಮಾಡಿ.
ಕಾರ್ಯಕ್ರಮವನ್ನು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಉದ್ಘಾಟಿಸಲಿದ್ದು, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ ಕಲ್ಕೂರ ಭಾಗವಹಿಸಲಿದ್ದಾರೆ. ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರು ದಿವಾಣ ಸಂಸ್ಮರಣೆ ಭಾಷಣ ಮಾಡಲಿದ್ದಾರೆ.
ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಅವರಿಗೆ ದಿವಾಣ ಭೀಮ ಭಟ್ಟ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಒಳಗೊಳ್ಳಲಿದೆ. ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ ಅವರು ಅಭಿನಂದನ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಸಿದ್ಧ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರಿಗೆ ದಿವಾಣ ಕಲಾ ಗೌರವ ನೀಡಲಾಗುತ್ತದೆ.
ಸಭಾ ಕಾರ್ಯಕ್ರಮದ ಬಳಿಕ ಹನುಮಗಿರಿ ಮೇಳದ ಕಲಾವಿದರಿಂದ ಬ್ರಹ್ಮ ಕಪಾಲ ಹಾಗೂ ಇಂದ್ರಜಿತು ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.
Tags:
ಸುದ್ದಿ