![]() |
ಶ್ರೀಮತಿ ಲೀಲಾವತಿ ಬೈಪಾಡಿತ್ತಾಯ ಹಾಗೂ ಹರಿನಾರಾಯಣ ಬೈಪಾಡಿತ್ತಾಯ ದಂಪತಿ |
ಉಡುಪಿ: ಯಕ್ಷಗಾನ ರಂಗದಲ್ಲಿ ತಮ್ಮದೇ ಆದ ಶೈಲಿಯ ಮೂಲಕ ಛಾಪು ಮೂಡಿಸಿರುವ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ಗುರು ದಂಪತಿಗಳು ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ನೀಡಲಾಗುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹50,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂಬುದಾಗಿ ಪಲಿಮಾರು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಕ್ಷಗಾನ.ಇನ್ ಅಪ್‌ಡೇಟ್ಸ್ ಪಡೆಯಲು ಟೆಲಿಗ್ರಾಂನಲ್ಲಿ ಸೇರಿಕೊಳ್ಳಿ. ಫೇಸ್‌ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್‌ಸ್ಟಾಗ್ರಾಂ ಫಾಲೋ ಮಾಡಿ.
ಶ್ರೀ ವಿದ್ಯಾಮಾನ್ಯತೀರ್ಥರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ಏಪ್ರಿಲ್ 6ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಂದು ಗುರುವಾರ, ಪಲಿಮಾರಿನಲ್ಲಿರುವ ಮೂಲ ಮಠದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವಲ್ಲಿ ಯಕ್ಷಗಾನ ಕಲಾರಂಗವು ಸಹಕರಿಸಿದೆ.
ಹರಿನಾರಾಯಣ ಬೈಪಾಡಿತ್ತಾಯರು ಪರಂಪರೆಯ ಯಕ್ಷಗಾನದ ಹಿಮ್ಮೇಳದಲ್ಲಿ ಗುರುತಿಸಿಕೊಂಡಿದ್ದು, ಹಲವಾರು ಶಿಷ್ಯರನ್ನು ಯಕ್ಷಗಾನ ರಂಗಕ್ಕೆ ಕೊಡುಗೆ ನೀಡಿದ್ದಾರೆ. ಲೀಲಾವತಿ ಬೈಪಾಡಿತ್ತಾಯರು ಪ್ರಥಮ ಮಹಿಳಾ ಭಾಗವತರಾಗಿ ಹಲವಾರು ಮೇಳಗಳಲ್ಲಿ ಎರಡು ದಶಕಗಳ ಕಾಲ ತಿರುಗಾಟ ನಡೆಸಿದ್ದಲ್ಲದೆ ಅರ್ಧ ಶತಮಾನದಿಂದ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.
ಇಬ್ಬರೂ ಮಂಗಳೂರಿನ ಬಜಪೆ ಸಮೀಪದ ತಲಕಳದ ನಿವಾಸದಲ್ಲಿಯೇ ಎರಡು ದಶಕಗಳಿಂದ ಹಲವಾರು ಮಕ್ಕಳಿಗೆ ಯಕ್ಷಗಾನವನ್ನು ಧಾರೆ ಎರೆಯುತ್ತಿದ್ದಾರೆ.
ಅವರಿಬ್ಬರಿಗೂ ಯಕ್ಷಗಾನ ಡಾಟ್ ಇನ್ ತಾಣದ ಪರವಾಗಿ ಅಭಿನಂದನೆಗಳು.
ಓದಿ:
Tags:
ಸುದ್ದಿ