ಹಿರಿಯ ಹಿಮ್ಮೇಳ ವಾದಕ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಕೀರಿಕ್ಕಾಡು ಪ್ರಶಸ್ತಿ


ಕುಂಬಳೆ: ಹಿರಿಯ ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್‌ ಅವರಿಗೆ 2023ನೇ ಸಾಲಿನ ಕೀರಿಕ್ಕಾಡು ಪ್ರಶಸ್ತಿಯನ್ನು ದೇಲಂಪಾಡಿಯ ಕೀರಿಕ್ಕಾಡು ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ಇತ್ತೀಚೆಗೆ ಪ್ರದಾನ ಮಾಡಲಾಯಿತು.

ಬನಾರಿ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ, ಸಂಘದ ಸಂಸ್ಥಾಪಕ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಡನೀರಿನ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯ ಮಾತನಾಡಿ, ‘ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಗುರುಕುಲವನ್ನು ಸ್ಥಾಪಿಸಿ ಅನೇಕ ಮಂದಿ ಶಿಷ್ಯರನ್ನು ಸಿದ್ಧಪಡಿಸಿದ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರು ಅನನ್ಯ ಸಾಧಕ’ ಎಂದರು.
ಕವಯಿತ್ರಿ ಸತ್ಯವತಿ ಎಸ್. ಭಟ್ಕೊಳಚಿಪ್ಪು ಸಂಸ್ಮರಣಾ ಭಾಷಣ ಮಾಡಿದರು. ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ನುಡಿಗಳನ್ನಾಡಿದರು. ಪ್ರಶಸ್ತಿ ಸ್ವೀಕರಿಸಿದ ಪದ್ಯಾಣ ಶಂಕರನಾರಾಯಣ ಭಟ್‌ ಅವರು ಕೃತಜ್ಞತೆ ಸಲ್ಲಿಸಿದರು. ವನಜಾಕ್ಷಿ ಶಂಕರನಾರಾಯಣ ಭಟ್ ಅವರನ್ನೂ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

ಬನಾರಿ ಗೋಪಾಲಕೃಷ್ಣ ಕಲಾಸಂಘದ ಅಧ್ಯಕ್ಷ ಡಾ.ರಮಾನಂದ ಬನಾರಿ ಸ್ವಾಗತಿಸಿ, ಕಾರ್ಯದರ್ಶಿ ವಿಶ್ವವಿನೋದ ಬನಾರಿ ಸನ್ಮಾನ ಪತ್ರ ವಾಚಿಸಿದರು. ನಾರಾಯಣ ದೇಲಂಪಾಡಿ ನಿರೂಪಿಸಿದರು. ರಾಮಣ್ಣ ಮಾಸ್ಟರ್ ವಂದಿಸಿದರು.

ವಾರ್ಷಿಕೋತ್ಸವದ ಅಂಗವಾಗಿ ‘ವಿಭೀಷಣ ನೀತಿ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಭಾಗವತಿಕೆಯಲ್ಲಿ ರಚನಾ ಚಿದ್ಗಲ್, ಮೋಹನ ಮೆಣಸಿನಕಾಯಿ, ಚೆಂಡೆ–ಮದ್ದಳೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಕುಮಾರ ಸುಬ್ರಹ್ಮಣ್ಯ, ಟಿ.ಡಿ.ಗೋಪಾಲಕೃಷ್ಣ ಭಟ್, ವಿಷ್ಣುಶರಣ ಬನಾರಿ, ಶ್ರೀವತ್ಸ ಸುಳ್ಯ ಭಾಗವಹಿಸಿದ್ದರು. ಡಾ.ರಮಾನಂದ ಬನಾರಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ವೆಂಕಟರಾಮ ಭಟ್ ಸುಳ್ಯ, ಸದಾಶಿವ ರೈ ಬೆಳ್ಳಿಪಾಡಿ, ಗಣೇಶ ಕಂಬಳಿಕೆರೆ, ಎಂ.ರಮಾನಂದ ರೈ, ವಿದ್ಯಾಭೂಷಣ ಪಂಜಾಜೆ ಅರ್ಥಧಾರಿಗಳಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು